Belagavi NewsBelgaum NewsKarnataka News

*ಶಾಸಕರ ಸಹೋದರನ ಮಗನ ಕಾರು ಅಪಘಾತ*: *ಯುವಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಿತ್ತೂರು ಪಟ್ಟಣದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಶಾಸಕರ ಸಹೋದರನ ಮಗನ ಕಾರು ಅಪಘಾತವಾಗಿದ್ದು, ಬೈಕ್ ಸವಾರ ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ (22) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಿತ್ತೂರು ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಗೆ ಗುದ್ದಿದ ಕಾರು ಸ್ಥಳದಲ್ಲೇ ಸವಾರ ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ಘಟನೆ

ಗೋಕಾಕ್ ನ ಬಸವರಾಜ ಪುಡಕಲಕಟ್ಟಿ(22) ಮೃತ ದುರ್ದೈವಿ

ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ಘಟನೆ

ಬೆಳಗಾವಿಯಿಂದ ಕಿತ್ತೂರಿಗೆ ಬೈಕ್ ಮೇಲೆ ಕೆಲಸಕ್ಕೆ ಹೊರಟ್ಟಿದ್ದ ಬಸವರಾಜ ಮತ್ತು ಇಬ್ಬರು ಸ್ನೇಹಿತರು

ಅಪಘಾತದಲ್ಲಿ ಸಣ್ಣವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯ

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ

ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತ ಬಸವರಾಜ ಮೃತದೇಹ ಶಿಪ್ಟ್

ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು

ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ಪರಿಶೀಲನೆ

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ


Related Articles

Back to top button