National

*ರಾಜ್ಯಸಭೆಯಲ್ಲೂ ವಕ್ಫ್ ವಿಧೇಯಕ ಅಂಗೀಕಾರ*

ಪ್ರಗತಿವಾಹಿನಿ ಸುದ್ದಿ: ವಿರೋಧದ ನಡುವೆಯು ರಾಜ್ಯಸಭೆಯಲ್ಲಿ ತಡ ರಾತ್ರಿ 2.35ಕ್ಕೆ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್‌ಡಿಎ ಸರ್ಕಾರ ಯಶಸ್ವಿಯಾಗಿದೆ.

ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು. ಇನ್ನು ಮಸೂದೆ ಕಾನೂನಾಗಲು ಕೇವಲ ಒಂದು ಹೆಜ್ಜೆ ಬಾಕಿ ಇದೆ. ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ.

Home add -Advt

ಕೇಂದ್ರ ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಅದನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು. ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು. ಬಳಿಕ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ವಕ್ಸ್ ತಿದ್ದುಪಡಿ ಮಸೂದೆ 2025 ಅನ್ನು ಮಂಡಿಸಿದರು.

Related Articles

Back to top button