Kannada NewsKarnataka NewsNationalPolitics
*ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ಎಫ್ಐಆರ್ ನಲ್ಲಿ ಕೊಡಗು ಶಾಸಕರ ಹೆಸರು ಸೇರಿಸಬೇಕೆಂದು ಒತ್ತಾಯಿಸಿ ಬಿಜೆಪಿ ನಾಯಕರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದೇ ವೇಳೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿನಯ್ ಸೋಮಯ್ಯ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಶಾಸಕರಾದ ಮಂಥರ್ ಗೌಡ ಮತ್ತು ಎ.ಎಸ್. ಪೊನ್ನಣ್ಣ ಅವರ ಹೆಸರನ್ನು ಎಫ್ಐಆರ್ ನಲ್ಲಿ ಉಲ್ಲೇಖಿಸಬೇಕೆಂದು ಒತ್ತಾಯಿಸಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆ ವಿಕೋಪಕ್ಕೆ ತಿರುಗಿದ ಕಾರಣ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.