Latest

*ಯತ್ನಾಳ್ ಗೆ ಬಿಗ್ ಶಾಕ್: ಮತ್ತೊಂದು ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆ ಬಳಿಕ ಶಾಸಕ ಯತ್ನಾಳ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರವಾದಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಮೇಲೆ ದೂರು ದಾಖಲಾಗಿದೆ. 

ಏ. 7 ರಂದು ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮನವಮಿ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬ ವ್ಯಕ್ತಿ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಭಾಷಣ ಮಾಡುತ್ತಾ ಬಸನಗೌಡ ಪಾಟೀಲ್ “ಮೊಹಮ್ಮದ್ ಪೈಗಂಬರ್ ಬಾಳಾ ಸಾಹೇಬ್ ಠಾಕ್ರೆ ಮನೆಯಲ್ಲಿ ಹುಟ್ಟಿದ್ದ” ಎಂದು ಹೇಳಿದ್ದಾರೆ. ಇದರಿಂದ ಸಾಮಾಜಿಕ ಶಾಂತಿಗೆ ಧಕ್ಕೆ ಬರುವ ಸಂಭವವಿದ್ದು, ಮುಸ್ಲಿಮರ ಧಾರ್ಮಿಕ ನಂಬಿಕೆಗೆ ಆಘಾತ ತಂದ ಹೇಳಿಕೆ ನೀಡಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button