Latest

*ಸಮುದ್ರದಲ್ಲಿ ಟ್ರಫ್ ಸೃಷ್ಟಿ: ವಿವಿಧ ಜಿಲ್ಲೆಗಳಲ್ಲಿ ಐದು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ: ಆಗ್ನೇಯ ಬಂಗಾಳಕೊಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಭಾಗದಲ್ಲಿ ಟ್ರಫ್ ಸೃಷ್ಟಿಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. 

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದ್ದು, ಬಿರುಗಾಳಿ ಸಹಿತ ಮಿಂಚು ಮತ್ತು ಗುಡುಗಿನೊಂದಿಗೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಲಿದೆ.

Home add -Advt

ಇನ್ನು ದಕ್ಷಿಣ ಕರ್ನಾಟಕದ ಭಾಗದಲ್ಲಿ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರೊಂದಿಗೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Related Articles

Back to top button