
ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ಘೋರ ದುರಂತ ಸಂಭವಿಸಿದೆ. ಸಿಡಿಲು ಬಡಿದು ಒಂದೇ ದಿನ 61 ಜನರು ಸಾವನ್ನಪ್ಪಿದ್ದು, ಒಟ್ಟು 83 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಬಿಹಾರದ ವಿವಿಧೆಡೆ ಬಿರುಗಾಳಿ ಮಳೆ ಜೊತೆಗೆ ಸಿಡಿಲು ಅಪ್ಪಳಿಸಿದ ಪರಿಣಾಮ ನಿನ್ನೆ ಒಂದೇ ದಿನ 61 ಜನರು ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ಸಿಡಿಲು ಬಡಿದು ಒಟ್ಟು 83 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.