Kannada NewsKarnataka NewsNational
*ತುಮಕೂರು ರೈಲು ನಿಲ್ದಾಣ ಸದ್ಯದಲ್ಲೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣ?*

ಪ್ರಗತಿವಾಹಿನಿ ಸುದ್ದಿ: ತುಮಕೂರಿನ ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಸ್ವಾಮೀಜಿ ಅವರ ಹೆಸರಿಡುವ ಪ್ರಸ್ತಾವನೆ ಕುರಿತು ಸರ್ಕಾರ ಒಪ್ಪಿಗೆಯನ್ನು ಸೂಚಿಸಿದೆ.
ಅಲ್ಲದೇ ರೈಲು ನಿಲ್ದಾಣಕ್ಕೆ ಹೆಸರಿಡುವ ಬಗ್ಗೆ ಒಪ್ಪಿಗೆ ಸೂಚಿಸಿರುವ ಕುರಿತು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ರೈಲು ನಿಲ್ದಾಣ ಸದ್ಯದಲ್ಲೇ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ರೈಲು ನಿಲ್ದಾಣವೆಂದು ಮರುನಾಮಕರಣವಾಗುವ ಭರವಸೆ ಇದೆ.
ರಾಜ್ಯ ಸರ್ಕಾರದ ಒಪ್ಪಿಗೆ ಕುರಿತಾಗಿ ಮೂಲಸೌಲಭ್ಯ ಅಭಿವೃದ್ಧಿ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ಮಂಜುಲಾ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.