Kannada NewsKarnataka NewsLatest

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ೨೦೧೯ನೇ ಸಾಲಿನ  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಹಾಗೂ ಪ್ರಸಾರಾಂಗ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಖ್ಯಾತ ಚಿಂತಕರು ಹಾಗೂ ಭಾಷಣಕಾರರಾದ ಹಿರೇಮಗಳೂರು ಕಣ್ಣನ್ ಇವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

೨೦೧೯ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಹೂಲಿಶೇಖರ, ಡಾ. ಎಸ್. ಆರ್. ಗುಂಜಾಳ, ಹಾಗೂ ಶಿವಾಜಿ ಕಾಗಣೀಕರ ಅವರನ್ನು ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರೇಮಗಳೂರು ಕಣ್ಣನ್ ಅವರು ಕನ್ನಡ ಭಾಷೆ ಭವ್ಯವಾದ ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದೆ. ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಯುವ ಜನಾಂಗದ ಮೇಲಿದೆ. ಕನ್ನಡದ ಉತ್ಸವ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಅವರು ಮಾತನಾಡಿ ’ಕನ್ನಡ ಭಾಷೆ ಅತ್ಯಂತ ಸಂಪತ್ಭರಿತ ಸಾಹಿತ್ಯ ಹಾಗೂ ವೈಚಾರಿಕತೆಯಿಂದ ಕೂಡಿದೆ. ನಮ್ಮ ಮಕ್ಕಳಿಗೆ ಮಾತೃ ಭಾಷೆ ಕನ್ನಡದಲ್ಲಿ ಶಿಕ್ಷಣ ಕೊಡಬೇಕಾದ ಅವಶ್ಯಕತೆಯಿದೆ’ ಎಂದು ಹೇಳಿದರು.
ಕುಲಸಚಿವರಾದ ಡಾ. ಎ. ಎಸ್. ದೇಶಪಾಂಡೆ ಸ್ವಾಗತಿಸಿದರು.  ಪರೀಕ್ಷಾ ಕುಲಸಚಿವರಾದ ಡಾ. ಸತೀಶ ಅಣ್ಣೀಗೇರಿ ವಂದನಾರ್ಪಣೆ ಮಾಡಿದರು.  ಪುಸ್ತಕ ಪ್ರಕಟನಾ ಸಮಿತಿ ಅಧ್ಯಕ್ಷರಾದ ಡಾ. ಸಿ. ಕೆ. ಸುಬ್ಬರಾಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.  ಸಹ ಪ್ರಾಧ್ಯಾಪಕಿ ಡಾ. ಶಾಂತಾ ಪೋರಾಪುರ ಪ್ರಸಾರಾಂಗ ಕಾರ್ಯಕ್ರಮಗಳ ಉದ್ಘಾಟನೆ ನಡೆಸಿಕೊಟ್ಟರು.
ನಾಗಶ್ರೀ ತ್ಯಾಗರಾಜ, ವಿತಾವಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button