Film & Entertainment

*ಮತ್ತೆ ಜೈಲುಪಾಲಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್*

ಪ್ರಗತಿವಾಹಿನಿ ಸುದ್ದಿ: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಜೈಲುಪಾಲಾಗಿದ್ದಾರೆ.

ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲುಸೇರಿದ್ದ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆಯಾಗಿ ಹೊರ ಬಂದಿದ್ದ ರಜತ್ ಗೆ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಕೋರ್ಟ್ ಆದೇಶ ಪಾಲಿಸದೇ ನಿರ್ಲಕ್ಷ ವಹಿಸಿದ್ದ ರಜತ್, ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ರಹಿತ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿತ್ತು. ವಾರೆಂಟ್ ಜಾರಿಯಾಗುತ್ತಿದ್ದಂತೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ರಜತ್ ನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

ಈ ವೇಳೆ ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ರಜತ್ ಗೆ ಮತ್ತೆ 14 ದಿನಗಳ ಕಾಲ ಅಂದರೆ ಏ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button