Belagavi NewsBelgaum NewsKarnataka NewsPolitics

*ನ್ಯಾಷನಲ್ ಹೆರಾಲ್ಡ್ ಪ್ರಕರಣ; ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದು, ಅವರು ತಮ್ಮ ಸಂವಿಧಾನಿಕ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.‌

ಇಂದು ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿಲಾಯಿತು. ಬಳಿಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಭಾವ ಚಿತ್ರ ಸುಟ್ಟು ಆಕ್ರೋಶ ಹೊರ ಹಾಕಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಇಡಿ ಛೀಮಾರಿ ಹಾಕಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ  ಕೋಟ್ಯಾಂತರ ರೂ. ಹಗರಣವನ್ನು ತಾಯಿ ಮಗ ಸೇರಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ ಆರೋಪಿ ನಂ.1 ರಾಹುಲ್ ಗಾಂಧಿ ಆರೋಪಿ ನಂ. 2 ಇದ್ದು ಅವರು ವಿರುದ್ಧ ಈಗಾಗಲೇ ಚಾರ್ಜ್ ಶೀಟ್ ಫೈಲ್ ಮಾಡಲಾಗಿದೆ. ಸ್ವಾತಂತ್ರ್ಯ ಯೋಧರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದೂರಪಯೋಗ ಮಾಡಿದ್ದಾರೆ. ಹಾಗಾಗಿ ಇವರು ಸಂವಿಧಾನಿಕ ಹುದ್ದೆಯಲ್ಲಿ ಇರಲು ನಾಲಾಯಕ್ಕು. ಮೊದಲು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ತಮ್ಮ ಸಂವಿಧಾನಿಕ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು. ಒಂದು ಸಂಸ್ಥೆಯಿಂದ ಮತ್ತೊಂದು ಸಂಸ್ಥೆಗೆ ಹಣ ವರ್ಗಾವಣೆ ಮಾಡಿ, ಅಕ್ರಮ ಮಾಡಲಾಗಿದೆ ಎಂದು ಆರೋಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button