Karnataka News

*ಚುರುಕಾದ ಮುಂಗಾರು: ರಾಜ್ಯದಲ್ಲಿ ಒಂದು ವಾರ ಭರ್ಜರಿ ಮಳೆ*

ಪ್ರಗತಿವಾಹಿನಿ ಸುದ್ದಿ : ಬಿರುಬೇಸಿಗೆಯ ಬಿಸಿಲಿನ ನಡುವೆ ರಾಜ್ಯದ ಅನೇಕ ಕಡೆ ಮಳೆರಾಯ ತಂಪೆರೆಯುತ್ತಿದ್ದಾನೆ. ಈ ನಡುವೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ 1 ವಾರ ಭಾರಿ ಮಳೆಯಾಗುವ ಕುರಿತು ಅಂದಾಜಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆ ಚುರುಕಾಗಲಿದ್ದು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ಮಂಡ್ಯ ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button