LatestNational

*ಆಭರಣ ಪ್ರಿಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಚಿನ್ನದ ಬೆಲೆ*

ಪ್ರಗತಿವಾಹಿನಿ ಸುದ್ದಿ: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂಪಾಯಿ ದಾಟಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ.

Home add -Advt

24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂ ಗೆ 10,135 ರೂ ತಲುಪಿದ್ದು, 10 ಗ್ರಾಂ ಗೆ 1,01,350 ರೂ ಆಗಿದೆ. ಈ ಮೂಲಕ ಭಾರತದಲ್ಲಿ ಚಿನ್ನದ ದರ 1 ಲಕ್ಷ ರೂಪಾಯಿ ದಾಟಿರುವುದು ಇದೇ ಮೊದಲು.

22 ಕ್ಯಾರೆಟ್ ಚಿನ್ನದ ದರ ಒಂದು ಗ್ರಾಂ ಗೆ 9,290 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ ಗೆ 92,900 ರೂ ಆಗಿದೆ. ಬಂಗಾರದ ಬೆಲೆ ಪ್ರತಿದಿನ ಏರಿಕೆಯಾಗುತ್ತಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ.

Related Articles

Back to top button