
ಪ್ರಗತಿವಾಹಿನಿ ಸುದ್ದಿ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಗನ್ ಮ್ಯಾನ್ ವಿಠಲ್ ನನ್ನು ಬಿಡದಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆಯಿಂದ ಕಾರಿನಲ್ಲಿ ಹೊರ ಬರುತ್ತಿದ್ದ ವೇಳೆ ಕೆಲದಿನಗಳ ಹಿಂದೆ ಬಿಡದಿ ಬಳಿ ಫೈರಿಂಗ್ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.