
ಪ್ರಗತಿವಾಹಿನಿ ಸುದ್ದಿ: ಕಲ್ಲು ಕ್ವಾರಿ ಕ್ರಷರ್ ಗೆ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆದಿದೆ.
ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ಚಿಕನ್ ರವಿ ಎಂಬುವವರ ದೇಹದೊಳಗೆ ಹೊಕ್ಕಿದೆ.
ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ೦ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ ಪಿ ಕುಶಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.