Belagavi NewsBelgaum NewsKarnataka News
*ಇಂದು ಬೆಳಗಾವಿ ಸೇರಿದಂತೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಸೇರಿದಂತೆ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಸಂಜೆ ವೇಳೆಗೆ ಮಳೆಯಾಗಲಿದ್ದು, ಅನೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದು ವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಬೀದರ್ನಲ್ಲಿ ಒಣಹವೆ ಮುಂದುವರೆದಿದೆ.
ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.



