Karnataka News

*ಕಾಲು ಜಾರಿ ಕೆರೆಗೆ ಬಿದ್ದ ಮಗಳು ನೀರುಪಾಲು; ರಕ್ಷಿಸಲು ಹೋದ ತಂದೆಯೂ ಸಾವು*

ಪ್ರಗತಿವಾಹಿನಿ ಸುದ್ದಿ: ತಂದೆ ಹಾಗೂ ಮಗಳು ಇಬ್ಬರೂ ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಈ ಘಟನೆ ನಡೆದಿದೆ. ತಂದೆ ನಾಗೇಶ್ ಹಾಗೂ ಮಗಳು ಧನುಶ್ರೀ ಮೃತರು. ಧನುಶ್ರೀ ೬ನೇ ತರಗತಿಯಲ್ಲಿ ಓದುತ್ತಿದ್ದಳು. ಅಪ್ಪ ತೋಟದ ಕೆಲಸಕ್ಕೆ ಹೋಗಿದ್ದ ವೇಳೆ ಮಗಳು ಅಪ್ಪನ ಜೊತೆ ತೋಟಕ್ಕೆ ಹೋಗಿದ್ದಳು. ಈ ವೇಳೆ ಕೆರೆ ನೀರಿನಲ್ಲಿ ಕಾಲು ತೊಳೆಯಲು ಹೋಗಿ ಜಾರಿ ಕೆರೆಗೆ ಬಿದ್ದಿದ್ದಾಳೆ. ಮಗಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ತಂದೆ ಆಕೆಯನ್ನು ರಕ್ಷಿಸಲು ನೀರಿಗಿಳಿದಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button