Politics

*ಸಿದ್ದರಾಮಯ್ಯಗೆ ಪಾಕಿಸ್ತಾನದ ಅತ್ಯುನ್ನತ ಪ್ರಶಸ್ತಿ ನೀಡುವುದು ಖಚಿತ: ಆರ್ ಅಶೋಕ ಲೇವಡಿ*

ಪ್ರಗತಿವಾಹಿನಿ ಸುದ್ದಿ : ಪೆಹಲ್ಗಾಮ್ ದಾಳಿಯ ಬಗ್ಗೆ ಮಾತನಾಡುತ್ತಾ ಪಾಕಿಸ್ತಾನದ ಪರವಾಗಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಪಾಕ್ ಮಾಧ್ಯಮಗಳಲ್ಲಿ ಪ್ರಶಂಸೆಗೊಳಗಾಗಿದ್ದನ್ನು ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕ ಆ‌ರ್. ಅಶೋಕ್ ಲೇವಡಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಶಾಂತಿದೂತರಾಗಿದ್ದಾರೆ. ಅವರಿಗೆ ಪಾಕಿಸ್ತಾನದ ಅತ್ಯುನ್ನತ ಪ್ರಶಸ್ತಿ ನೀಡುವುದು ಖಚಿತ ಎಂದು ಲೇವಡಿ ಮಾಡಿದ್ದಾರೆ.

Home add -Advt

ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದಿದ್ದಾರೆ.

ಜೊತೆಗೆ, ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಆ‌ರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Related Articles

Back to top button