ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸೋಮವಾರ ರಾತ್ರಿ ಜಿಲ್ಲೆಗೆ ಆಗಮಿಸಿದ ಸಚಿವ ಸತೀಶ ಜಾರಕಿಹೊಳಿ ಚನ್ನಮ್ಮ ಕಿತ್ತೂರು ಹೆದ್ದಾರಿ ಪಕ್ಕದಲ್ಲಿರುವ ಚನ್ನಮ್ಮಾಜಿಯ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಚಿವನಾಗಿದ್ದು ಸಂತಸ ತಂದಿದೆ, ಹೈಕಮಾಂಡ್ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ನಾನು ಅಭಾರಿಯಾಗಿದ್ದು ಸರ್ಕಾರ ನನಗೆ ಯಾವುದೆ ಖಾತೆ ನೀಡಿದರೂ ನಿಭಾಯಿಸುತ್ತೆನೆಂದು ವಿಶ್ವಾಸ ವ್ಯಕ್ತ ಪಡಿಸಿದರು.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಿಗಮ ಮಂಡಳಿ ವಿಷಯಕ್ಕೆ ಸಂಬಂದಿಸಿದಂತೆ ಕಾಂಗ್ರೆಸ್ ಪಕ್ಷದ ಕೋಟಾ ಭರ್ತಿ ಮಾಡಲಾಗಿದೆ. ಇನ್ನು ಜೆಡಿಎಸ್ ಪಕ್ಷ ತನ್ನ ಕೋಟಾ ಭರ್ತಿ ಮಾಡಿಕೊಳ್ಳಬೇಕಿದೆ ಎಂದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕೂಗು ಜೋರಾಗಿ ಕೇಳಿ ಬರುತ್ತಿತ್ತು. ಆದರೆ ಅದನ್ನು ಸರಿಪಡಿಸುವ ಪ್ರಯತ್ನ ಕಾಂಗ್ರೆಸ್ ಹೈಕಮಾಂಡ್ ಮಾಡಿದೆ ಎಂದರು.
ಅಪಾರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಬಾಬಾಸಾಹೇಬ ಪಾಟೀಲ, ಮಾಜಿ ಕೆಪಿಸಿಸಿ ಸದಸ್ಯ ಶಂಕರ ಹೊಳಿ, ಅಭಿಮಾನಿ ಬಳಗದ ಅಧ್ಯಕ್ಷ ಹಬೀಬ ಶಿಲೇದಾರ, ಪಪಂ ಉಪಾಧ್ಯಕ್ಷ ಕಿರಣ ವಾಳದ, ಸಂತೋಶ ಲಕ್ಕುಂಡಿ, ವಿಜಯಕುಮಾರ ಪಟ್ಟೇದ, ಶಿವಪ್ರಸಾದ ಗಡೆನ್ನವರ, ಮಾರುತಿ ನಾಯ್ಕರ, ಸಾವಂತ ಕಿರಬನವರ, ಉಳವಪ್ಪ ಲಕ್ಕುಂಡಿ, ಮುದಕಪ್ಪ ಮರಡಿ, ಮಂಜುನಾಥ ಗಡೆನ್ನವರ ಸೇರಿದಂತೆ ಎಲ್ಲ ಸತೀಶ ಜಾರಕಿಹೊಳಿ ಬಳಗದ ಅಭಿಮಾನಿಗಳು ಇತರರು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ