Kannada NewsKarnataka NewsNationalPolitics

*12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಸೇರಿದಂತೆ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 4-5 ದಿನ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮನಾ ಇಲಾಖೆ ತಿಳಿಸಿದೆ.

ರಾಜ್ಯದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ ದಲ್ಲಿ ಏ.30 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button