Politics

*ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಚರಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಒಟ್ಟು 3000 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಲಾಗಿದೆ.

ಚಾರ್ಜ್ ಶೀಟ್ ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರ್ಣ ಕುಮಾರ್, ಮಂಜುನಾಥ್ ಹೆಸರನ್ನು ಉಲ್ಲೇಖಿಸಲಾಗಿದೆ. ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ವಿಡಿಯೋ, ಫೋಟೊ ಮಾಡಿರುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ.

Related Articles

Back to top button