Karnataka News

*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಪೌರ ಕಾರ್ಮಿಕ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಲಾರಿ ಡಿಕ್ಕಿಯಾಗಿ ಪೌರ ಕರಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಬಿಬಿಎಂಪಿ ಪೌರ ಕರಮಿಕ ಮಹಿಳೆ ಸಾವನ್ನಪ್ಪಿದ್ದಾರೆ.

ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಕೆಳಗೆ ಬಿದ್ದಿದ್ದು, ಅವರ ಮೇಲೆಯೇ ಟಿಪ್ಪರ್ ಹರಿದಿದೆ. ಚಕ್ರದಡಿ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪಾರಾರಿಯಾಗಿದ್ದಾನೆ.

Related Articles

Back to top button