Kannada NewsKarnataka NewsLatest

*ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಆಯುಕ್ತ ತುಷಾ‌ರ್ ಗಿರಿನಾಥ್*

ಪ್ರಗತಿವಾಹಿನಿ ಸುದ್ದಿ : ಬಿಬಿಎಂಪಿ ಆಯುಕ್ತ ತುಷಾ‌ರ್ ಗಿರಿನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದೆ. ಅವರನ್ನು ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ತುಷಾರ್ ಗಿರಿನಾಥ್ ಅವರು ಎರಡೂವರೆ ವರ್ಷಗಳ ಕಾಲ ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿದ್ದರು.

ತುಷಾರ್ ಗಿರಿನಾಥ್ ಅವರು ಈ ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯಸ್ಥರಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button