Kannada NewsKarnataka NewsNationalPoliticsTravel

*ಬಸ್ ನಲ್ಲಿ ನಮಾಜ್ ಮಾಡಿದ್ದ ಬಸ್ ಚಾಲಕ ಅಮಾನತ್ತು*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿ ಆರ್ ಮುಲ್ಲಾ ಎಂಬುವರು ಬಸ್ ಅನ್ನು ನಡು ರಸ್ತೆಯಲ್ಲೇ ನಿಲ್ಲಿಸಿ ನಮಾಜ್ ಮಾಡಿರುವ ಘಟನೆಗೆ ಎಲ್ಲಡೆ ಭಾರಿ ವಿರೋಧ ವ್ಯಕ್ತವಾಗಿದ್ದು, ಬಸ್ ಚಾಲಕನನ್ನು ಅಮಾನತ್ತು ಮಾಡಲಾಗಿದೆ.

ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಕರು ಇದ್ದರೂ ಕೂಡಾ ಚಾಲಕ ಕರ್ತವ್ಯದ ಅವಧಿಯಲ್ಲಿ ಬಸ್ ನಿಲ್ಲಿಸಿ ಸೀಟ್‌ನಲ್ಲಿ ಕುಳಿತುಕೊಂಡು ನಮಾಜ್ ಮಾಡಿದ್ದಾರೆ. 

ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣದ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ತನಿಖೆ ನಡೆಸಿ ತಪ್ಪು ಕಂಡುಬಂದರೆ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button