*ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಾನಂದ ಪಾಟೀಲ್*

ಪ್ರಗತಿವಾಹಿನಿ ಸುದ್ದಿ : ಶಾಸಕ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಭಾಪತಿ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿರುವ ಅವರು ತನ್ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲ್ ನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ.
ತನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಸನಗೌಡ ಪಾಟೀಲ್ ಪಂಥಾಹ್ವಾನ ನೀಡಿದ್ದರು. ಈಗ ಶಿವಾನಂದ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿದ್ದು ಬಸನಗೌಡ ಪಾಟೀಲ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ನಿನ್ನೆ ಮಾತನಾಡಿದ್ದ ಶಾಸಕ ಯತ್ನಾಳ್ ಅವರು, ಶಿವಾನಂದ ಪಾಟೀಲ್ ಅವರಪ್ಪನಿಗೆ ಹುಟ್ಟಿದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ, ಅವರ ಮನೆ ಹೆಸರು ಪಾಟೀಲ್ ಅಲ್ಲ ಹಚಡದ. ನಿಮ್ಮಪ್ಪ ನೀವು ಸೇರಿ ನಿಮ್ಮ ಅಡ್ಡ ಹೆಸರು ಬದಲಾಯಿಸಿಕೊಂಡಿದ್ದೀರಿ. ರಾಜಕಾರಣಕ್ಕಾಗಿ ಪಾಟೀಲ್ ಎಂದು ಮಾಡಿಕೊಂಡಿದ್ದಾರೆಂ. ಶಿವಾನಂದ ಪಾಟೀಲ್ ಹಾಗೂ ವಿಜಯಾನಂದ ಕಾಶಪ್ಪನವರ ಒಂದು ವಾರದಲ್ಲಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಸಭಾಪತಿಯವರಿಂದ ರಾಜೀನಾಮೆ ಅಂಗೀಕಾರ ಮಾಡಿಕೊಂಡು ಬನ್ನಿ, ನೀವು ಪಕ್ಷೇತರರಾಗಿ ಬನ್ನಿ ನಾನು ಬರುವೆ, ಬಾಗೇವಾಡಿಯಲ್ಲೇ ಬಂದು ಮಣ್ಣು ಕೊಡುತ್ತೇನೆಂದು ಹೇಳಿದ್ದರು.




