Belagavi NewsBelgaum NewsKannada NewsKarnataka News

*ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರ ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೃಷಿಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋದಾಗ ಹೊಂಡದಲ್ಲಿ ಬಿದ್ದು ಬಾಲಕರು ಸಾವನ್ನಪ್ಪಿದ್ದಾರೆ.

Home add -Advt

ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. 

ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ವಿಚಾರ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನಿಸುವ ಕಾರ್ಯವನ್ನ ಪೊಲೀಸರು ಮಾಡಿದ್ದಾರೆ.

ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Related Articles

Back to top button