Karnataka News

*ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಇಬ್ಬರು ಸಿಬ್ಬಂದಿಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣದ ಬಳಿಕ ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡರೂ ಎಚ್ಚೆತ್ತುಕೊಳ್ಳದ ಅಧಿಕಾರಿ, ಸಿಬ್ಬಂದಿಗಳು ನೀಟ್ ಪರೀಕ್ಷೆಯಲ್ಲಿಯೂ ಇದೇ ತಪ್ಪು ಮಾಡಿದ್ದಾರೆ.

ಕಲಬುರಗಿಯಲ್ಲಿ ನೀಟ್ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಸಂಬಂಧ ಇದೀಗ ಕಲಬುರಗಿಯ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಾದ ಶರಣ ಗೌಡ ಹಾಗೂ ಗಣೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಗಳ ವಿರುದ್ಧ ಬಿಎನ್ ಎಸ್ ಕಾಯ್ದೆ 298ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button