Belagavi NewsBelgaum NewsKarnataka News

*ಮಾಜಿ ಶಾಸಕನ ಪುತ್ರನಿಂದ ಕಾರು ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಎರಡು ಕಾರುಗಳು ನಡುವೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಸಂಭವಿಸಿದೆ. 

ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ (26), ಉಮೇಹೈಮಾನ ಸೈಯ್ಯದ (22), ಒಂದು ವರ್ಷದ ಮಗು ಅಹ್ಮದ ಸೈಯ್ಯದ್ ಮೃತ ದುರ್ದೈವಿಗಳು. 

ಆಯಿಷಾ ಸೈಯ್ಯದ (18) ಹಾಗೂ ಇನ್ನೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ.ಪಾಟೀಲ ಅವರ ಪುತ್ರ ಸುರೇಶಗೌಡ ಪಾಟೀಲ ಗಾಯಗೊಂಡು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಸೈಯ್ಯದ ಕುಟುಂಬ ಗೋಕಾಕ ನಗರದಲ್ಲಿ ಸಂಬಂಧಿಕರ ಮದುವೆ ಮುಗಿಸಿಕೊಂಡು ಅಲ್ಲೋ ಕಾರಿನಲ್ಲಿ ಬರುವಾಗ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಮಾಜಿ ಶಾಸಕ ಆರ್.ವಿ.ಪಾಟೀಲ ಪುತ್ರ ಕಿಯಾ ಕಾರನ್ನು ಓವರ್ ಟೆಕ್ ಮಾಡಲು ಹೋಗಿ ಅಲ್ಲೋ ಕಾರಿಗೆ ಎದುರಿನಿಂದ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬೈಲಹೊಂಗಲ ಪೊಲೀಸ್ ಠಾಣೆಯ ಸಿಪಿಐ ಪಂಚಾಕ್ಷರಿ ಸಾಲಿಮಠ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button