Karnataka News

*ಸಿಎಂ ವಿರುದ್ಧ ನಿಂದಿಸಿ ವಿಡಿಯೋ ಹರಿಬಿಟ್ಟ ಪ್ರಕರಣ: ಕಾರಾಗೃಹ ವೀಕ್ಷಣೆಗಾರ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಕೇಂದ್ರ ಕಾರಾಗೃಹ ವೀಕ್ಷಣೆಗಾರ ಹೆಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದ್ದ ಘಟನೆ ಬಗ್ಗೆ ಹೆಚ್.ಎನ್.ಮಧು ಕುಮಾರ್, ವಿಡಿಯೋ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬಾಯಿಗೆ ಬಂದಂತೆ ನಿಂದಿಸಿ ವಿಡಿಯೋ ಅಪ್ ಲೋಡ್ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಕಾರಾಗೃಹದ ಅಧೀಕ್ಷಕ ಪಿ.ಎಸ್.ರಮೇಶ್, ಹೆಚ್.ಎನ್.ಮಧುಕುಮಾರ್ ಅವರನ್ನು ತಕ್ಷಣ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button