Kannada NewsKarnataka NewsLatest

ರಸ್ತೆ, ಚರಂಡಿ ಕಾಮಗಾರಿಗೆ ಗಣೇಶ ಹುಕ್ಕೇರಿ ಚಾಲನೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ಚಿಕ್ಕೋಡಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.

ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮಂಜೂರಾಗಿದೆ. ಈ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಲಾಯಿತು.

Home add -Advt

“ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಕಾಶ ಹುಕ್ಕೇರಿ ಶಾಸಕರಾಗಿದ್ದ ಕಾಲದಿಂದಲೂ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತ ಬರಲಾಗಿದೆ. ಸರಕಾರ ಯಾವುದೇ ಇದ್ದರೂ ಕ್ಷೇತ್ರಕ್ಕೆ ಸಾಕಷ್ಟು ಅನುಧಾನ ತರಲಾಗುತ್ತಿದೆ. ಕ್ಷೇತ್ರದ ಜನರ ಎಲ್ಲ ಬೇಡಿಕೆಗಳಿಗೆ ನಿರಂತರ ಸ್ಪಂದಿಸುತ್ತಿರುವುದರಿಂದಲೇ ಜನರು ನಮ್ಮನ್ನು ಪ್ರತಿ ಬಾರಿ ಆಯ್ಕೆ ಮಾಡುವ ಮೂಲಕ ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ” ಎಂದು ಗಣೇಶ ಹುಕ್ಕೇರಿ ಈ ಸಂದರ್ಭದಲ್ಲಿ ತಿಳಿಸಿದರು.

ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button