Kannada NewsKarnataka NewsNationalPoliticsTravelWorld

*ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ಮೇಲೆ ದಾಳಿ ಮಾಡಿ ಉತ್ತರಿಸಿದ ಭಾರತೀಯ ಸೇನೆ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆಯ ಮೇಲೆ ರಾತ್ರೋರಾತ್ರಿ ಭಾರತೀಯ ವಾಯುಪಡೆ ದಾಳಿ ನಡೆಸಿದೆ. 

ಪಾಕಿಸ್ತಾನ ವಾಯುಪಡೆಯ ನೆಲೆ, ನೂ‌ರ್ ಖಾನ್ ಪಂಜಾಬ್ ಪ್ರಾಂತ್ಯದ ರಾವಲ್ಪಿಂಡಿಯ ಚಕ್ಲಾಲಾದಲ್ಲಿದೆ. ಪಾಕಿಸ್ತಾನ ಸೇನೆಯು ಭಾರತದ ವಾಯುನೆಲೆಗಳು ಮತ್ತು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಉತ್ತರವಾಗಿ ಭಾರತೀಯ ಸೇನೆಯು ಈ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇನ್ನು ಲಾಹೋರ್‌ನಾದ್ಯಂತ ಹಲವಾರು ಸ್ಫೋಟಗಳ ಸದ್ದು ಕೇಳಿಬಂದಿದೆ ಎಂದು ಪಾಕಿಸ್ತಾನಿ ಮಾಧ್ಯಮಗಳು ಶುಕ್ರವಾರ ರಾತ್ರಿ ವರದಿ ಮಾಡಿವೆ. ಕಳೆದ ವಾರದಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದು ಸಂಭವಿಸಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button