Karnataka News

*ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ*

ಪ್ರಗತಿವಾಹಿನಿ ಸುದ್ದಿ : ಕಳೆದ ಒಂದು ವಾರದಿಂದ ಬ್ರೇಕ್ ನೀಡಿದ್ದ ಮಳೆರಾಯ, ಇದೀಗ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿರುವ ಕುರಿತು ಅಂದಾಜಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಂ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಹಾಸನ, ಶಿವಮೊಗ್ಗ ಚಿಕ್ಕಬಳ್ಳಾಪುರ ದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ 3-4 ದಿನಗಳಿಂದ ಒಣಹವೆ ಹಾಗೂ ಬಿಸಿಲು ಹೆಚ್ಚಿದ್ದು ತಾಪಮಾನ ಏರಿಕೆಯಿಂದ ಜನರು ಕಂಗಾಲಾಗಿದ್ದು, ಇದೀಗ ಮಳೆ ಬೀಳುವ ವಿಚಾರ ಕೊಂಚ ಸಮಾಧಾನ ತಂದಿದೆ.ಮೇ 12 ತನಕ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button