National

*ಪಾಕಿಸ್ತಾನ‌ ನಡೆಸಿದ ಶೆಲ್ ಹಾಗೂ ಡ್ರೋನ್ ದಾಳಿಗೆ ಬಿಎಸ್ಎಫ್ ಯೋಧ ಸಾವು*

ಪ್ರಗತಿವಾಹಿನಿ ಸುದ್ದಿ: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಶನಿವಾರ ರಾತ್ರಿ ಜಮ್ಮು – ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಶೆಲ್ ಹಾಗೂ ಡ್ರೋನ್ ದಾಳಿ ನಡೆಸಿದೆ. ಪರಿಣಾಮ ಈ ದಾಳಿಯಲ್ಲಿ ಬಿಎಸ್‌ಎಫ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. 

ಈ ದಾಳಿಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್ ಎಸ್ ಪುರ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ. 

ಸಬ್ ಇನ್ಸ್‌ಪೆಕ್ಟ‌ರ್ ಮೊಹಮ್ಮದ್ ಇಮೇಯಾಜ್ ಅವರು ಹುತಾತ್ಮರಾಗಿರುವುದಾಗಿ ಹಿರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಪಾಕಿಸ್ತಾನವು ಆರಂಭಿಸಿದ ಗಡಿಯಾಚೆಗಿನ ಗುಂಡಿನ ದಾಳಿಯಲ್ಲಿ ಇಮೇಯಾಜ್ ಗಾಯಗೊಂಡು ಹುತಾತ್ಮರಾದರೆ, ಇತರ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button