Karnataka News

*ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 7ರಂದು ಮನೆಯಿಂದ ಹೊರಹೋದವರು ಏಕಏಕಿ ನಾಪತ್ತೆಯಾಗಿದ್ದರು. ಇದೀಗ ಶ್ರೀರಗಪಟ್ಟಣದ ಬಳಿ ಸಾಯಿ ಆಶ್ರಮದ ಸಮೀಪ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಡಾ.ಸುಬ್ಬಣ್ಣ ಅಯ್ಯಪ್ಪನ್ ಮೈಸೂರಿನ ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಪ್ರದೇಶದಲ್ಲಿ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು. ನಾಲ್ಕು ದಿನಗಳ ಹಿಂದೆ ಸ್ಕೂಟರ್ ನಲ್ಲಿ ಮನೆಯಿಂದ ಹೊರ ಹೋದವರು ವಾಪಸ್ ಆಗಿರಲಿಲ್ಲ. ಈಗ ಅವರ ಸ್ಕೂಟರ್ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟನದ ಕಾವೇರಿ ನದಿ ದಡದಲ್ಲಿ ಪತ್ತೆಯಾಗಿದೆ. ನದಿಯಲ್ಲಿ ಅವರ ಮೃತದೇಹ ಸಿಕ್ಕಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button