Karnataka News

*ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿ: 7 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಪಲ್ಟಿಯಾದ ಘಟನೆ ನಡೆದಿದೆ.

ಏರ್‌ಪೋರ್ಟ್‌ಗೆ ತೆರಳುವ ಬೇಗೂರು ಜಂಕ್ಷನ್ ಬಳಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಷತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Home add -Advt

ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ 35 ಮಂದಿ ಕಾರ್ಮಿಕರನ್ನು ಊಟಕ್ಕೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಗಾಯಗೊಂಡ 7 ಮಂದಿ ಕಾರ್ಮಿಕರನ್ನು ಕೂಡಲೇ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸ್ಥಳಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಸ್ತೆಗೆ ಪಲ್ಟಿಯಾಗಿದ್ದ ಬಸ್ ತೆರವು ಮಾಡಿದ್ದಾರೆ.

Related Articles

Back to top button