Karnataka News

*ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನೆತೆ ತಪೆರೆದಂತಾಗಿದೆ.

ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹಲವು ರಸ್ತೆಗಳಲ್ಲಿ ನೀರು ತುಂಬಿ ಹರಿದಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಗುಂಡಿಮಯ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿವೆ. ಇನ್ನು ಹಲವೆಡೆ ರಸ್ತೆ ಕಾಮಗಾರಿ, ಚರಂಡಿ ಕಾಮಗಾರಿಗಾರಿ ಕೆಲಸ ನಡೆಯುತ್ತಿದ್ದು, ಕಾಲುವೆ, ರಸ್ತೆಗಳು ನದಿಯಂತೆ ತುಂಬಿಹರಿಯುತ್ತಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿವೆ.

ಬೆಂಗಳೂರಿನ ಆರ್.ಟಿ.ನಗರ, ಹೆಬ್ಬಾಳ, ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಆರ್.ಆರ್.ನಗರ, ಗಿರಿನಗರ, ಮೈಸೂರು ರಸ್ತೆ, ಹೊಸಕೆರೆ ಹಳ್ಳಿ, ಉತ್ತರಳ್ಳಿ, ನಾಯಂಡಹಳ್ಳಿ, ವಿಜಯನಗರ, ರಾಜಾಜಿನಗರ, ವೈಟ್ ಫೀಲ್ಡ್ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಿದೆ. ರಾತ್ರಿ ವೇಳೆಯೂ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button