Belagavi NewsBelgaum NewsKannada NewsKarnataka NewsNational

*ಬೆಳಗಾವಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಮೂವರು ಅಪ್ರಾಪ್ತರು ಅತ್ಯಾಚಾರ ಮಾಡಿದ್ದಾಗಿ ದೂರು ದಾಖಲಾಗಿದೆ.

ಬಾಲಕಿಯನ್ನು ನಯವಾಗಿ ಮಾತನಾಡಿಸಿ ಯುವಕರ ಗ್ಯಾಂಗ್ ನಗರ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು ಮೊದಲಿಗೆ ಪಾರ್ಟಿ ಮಾಡಿದ್ದು, ಆ ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಈ ಘಟನೆ ಮೇ 6ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ನಿನ್ನೆ (ಮೇ 12) ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೂಡಲೇ ತನಿಖೆ ಮಾಡಿದ ಪೊಲೀಸರು ಈಗಾಗಲೇ ಇಬ್ಬರು ಬಾಲಕರನ್ನು ಅರೆಸ್ಟ್ ಮಾಡಿ ಬಾಲ ಮಂದಿರಕ್ಕೆ ಸೇರಿಸಿದ್ದಾರೆ ಎನ್ನಲಾಗಿದೆ.

ಒಟ್ಟು ಮೂವರು ಬಾಲಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯ ಇನ್ನೋರ್ವ ಬಾಲಕನಿಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.

ಕಠಿಣ ಕ್ರಮ ಕೈಗೊಳ್ಳಿ

ಪ್ರಕರಣದ ಕುರಿತು ಆಘಾತ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button