Politics

*ಜನ್ಮದಿನಕ್ಕೆ ಹಾರೈಸಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದರೆ ತೆರವಿಗೆ ಡಿಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಒಂದೊಮ್ಮೆ ಯಾರಾದರೂ ನನ್ನ ಜನ್ಮದಿನಕ್ಕೆ ಹಾರೈಸಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕಿದ್ದರೆ ಅವುಗಳ ತೆರವಿಗೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮೇ 15ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಶುಭಕೋರಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ ನೀಡಿದ್ದಾರೆ.

ಭಯೋತ್ಪಾದನೆ ವಿರುದ್ಧ ನಮ್ಮ ಸೈನಿಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಹುಟ್ಟುಹಬ್ಬದ ಆಚರಣೆ ಬೇಡ. ಹಾಗಾಗಿ ಈಬಾರಿ ಹುಟ್ಟುಹಬ್ಬ ಆಚರಣೆ ಮಾಡುವುದಿಲ್ಲ ಎಂದು ಎಂದು ಡಿ.ಕೆ.ಶಿವಕುಮಾರ್ ಈ ಹಿಂದೆ ತಿಳಿಸಿದ್ದರು.

ಈ ಬಗ್ಗೆ ಟ್ವೀಟ್ ನಲ್ಲಿಯೂ ಮತ್ತೊಮ್ಮೆ ತಿಳಿಸಿರುವ ಡಿಸಿಎಂ, ಮೇ 15 ರಂದು ವೈಯಕ್ತಿಕ ಕಾರಣಗಳಿಂದ ಬೆಂಗಳೂರಿನಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರದ ಎರಡನೇ ವರ್ಷದ ಸಾಧನಾ ಸಮಾವೇಶದ ಸ್ಥಳ ಪರಿಶೀಲನೆಗೆ ವಿಜಯನಗರಕ್ಕೆ ತೆರಳುತ್ತಿರುವುದರಿಂದ ಮೇ 16 ರ ಸಂಜೆಯವರೆಗೂ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ. ದಯವಿಟ್ಟು ಇದನ್ನು ಅನ್ಯಥಾ ಭಾವಿಸದೆ, ಸಹಕರಿಸಬೇಕಾಗಿ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Home add -Advt


Related Articles

Back to top button