Karnataka News

*ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.‌

ಕಾವೇರಿ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ “ಒಳಕೋವೆ” ಕೃತಿ ಬಿಡುಗಡೆಗೊಳಿಸಿ, ಐದು ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು. ಇವತ್ತಿನ‌ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದರು.

Home add -Advt

ಇವತ್ತಿನ‌ ವ್ಯವಸ್ಥೆ ಸುಧಾರಣೆಗೆ ವಿರುದ್ಧವಾದದ್ದು. ವ್ಯವಸ್ಥೆ ಜೊತೆ ರಾಜಿ ಮಾಡಿಕೊಂಡರೆ ಏನಾಗತ್ತೆ, ರಾಜಿ ಮಾಡಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವ ಅರಿವು ನನಗೆ ಇದೆ ಎಂದರು. ಈ ಅರಿವು ಎಲ್ಲರಿಗೂ ಇರಬೇಕು. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ವರ್ಗ ವ್ಯವಸ್ಥೆಗೆ ಚಲನೆ ಇದೆ. ಅದಕ್ಕೇ ಬುದ್ದ, ಬಸವ ಅಂಬೇಡ್ಕರ್ ಎಷ್ಟು ಹೋರಾಡಿದರೂ ಜಾತಿ ಹೋಗಿಲ್ಲ. ಜಾತಿ ಎನ್ನುವುದು ಸಾಮಾಜಿಕ‌ ವಾಸ್ತವ. ಸಾಮಾಜಿಕ‌ ನ್ಯಾಯದ ಪರವಾದ ನಿಜವಾದ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುವವರು ಹೆಚ್ಚೆಚ್ಚು ಬರಬೇಕು ಎಂದರು.

ಡಾ.ಎಂ.ಎಸ್.ಮಣಿ ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಉಳ್ಳವರು. ಇವರು ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಐವತ್ತು ವರ್ಷಗಳ‌ ಕಾಲ ಪತ್ರಿಕಾ ವೃತ್ತಿಯ ಕುರಿತಾದ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ ಬಿ.ಕೆ.ರವಿ ಅವರ ಪತ್ರಿಕಾ ವೃತ್ತಿಯ 50 ಸಂಭ್ರಮದ ಹಿನ್ನಲೆ ಜೀವಮಾನದ ಸಾಧನೆಗಾಗಿ ಮುಖ್ಯಮಂತ್ರಿಗಳು ಸನ್ಮಾನಿಸಿದರು.

ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಹೆಸರುಗಳು…

1.ಡಾ.ಷರೀಫಾ, ಲೇಖಕಿ ಸಾಹಿತಿ.

2.ಡಾ.ನಳಿನಾಕ್ಷಿ ಸಣ್ಣಪ್ಪ ಸಮಾಜ ಸೇವಕರು.ಲೇಖಕಿ.

  1. ನಾಗವೇಣಿ, ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರು.
  2. ಸಂಗಮ್ ದೇವ್, ಹಿರಿಯ ಪತ್ರಕರ್ತರು.
  3. ಶಿವಲಿಂಗಪ್ಪ

Related Articles

Back to top button