National

*ಪುಲ್ವಾಮಾದಲ್ಲಿ ಮುಂದುವರೆದ ಎನ್ ಕೌಂಟರ್ ಕಾರ್ಯಾಚರಣೆ; ಮೂವರು ಉಗ್ರರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ನ ನಾದರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ ಈ ಪ್ರದೇಶದಲ್ಲಿ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆಸಲಾಗಿದೆ. ಕಳೆದ ಮೂರು ದಿನಗಳಲ್ಲಿ ಪುಲ್ವಾಮಾದಲ್ಲಿ ಒಟ್ಟು ಆರು ಉಗ್ರರು ಹತರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button