
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಕುರಾನ್ ಪುಸ್ತಕ ಕಳ್ಳತನ ಮಾಡಿ ಸುಟ್ಟಿರುವ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಪ್ರಕರಣಲ್ಲಿ ಪೊಲೀಸರ ವೈಫಲ್ಯ ಎದ್ದು ಕಂಡಿರವ ಕಾರಣ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಅಮಾನತ್ತು ಆಗಿದ್ದಾರೆ
ಕರ್ತವ್ಯ ಲೋಪ ಎಸಗಿದ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಅವರು, ಕುರಾನ್ ಪುಸ್ತಕ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಹಿರೇಮಠ ಅಮಾನತು ಮಾಡಲಾಗಿದೆ. ಇವರು ಕರ್ತವ್ಯ ಲೋಪ ಎಸಗಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಲ್ಲದೆ ಮುಸ್ಲಿಮ್ ಸಮಾಜದವರು ಸಿಪಿಐ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದರು.
ಸಂತಿ ಬಸ್ತವಾಡ ಗ್ರಾಮದಲ್ಲಿ ಈದ್ದಾ ಗೋಪುರ ಧ್ವಂಸ ಪ್ರಕರಣದಲ್ಲಿ ಆರೋಪಿ ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿದ್ದರು ಎಂದರು.