Karnataka News

ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದ ಬಾಲಕ ಸಾವು

ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ನಡೆದಿದೆ.

ವೀರೇಶ್ (13) ಮೃತ ಬಾಲಕ. ಕುರಿ ಮೇಯಿಸಲು ಹೋಗಿದ್ದ ವೀರೇಶ್ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕ ವೀರೇಶ್ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ.

ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button