
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ವಡಗಾಂವ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.18 ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಿಗ್ಗೆ 09.00 ಘಂಟೆಯಿಂದ ಸಾಯಂಕಾಲ 04.00 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಧಾಮನೆ, ಕುರುಬರಹಟ್ಟಿ, ಮಾಸ್ಥಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕ.ವಿ.ಪ್ರ.ನಿ.ನಿ, ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.