Karnataka NewsPolitics

*ಬಮೂಲ್ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ಡಿಕೆ ಸುರೇಶ್*

ಪ್ರಗತಿವಾಹಿನಿ ಸುದ್ದಿ: ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆ ಹಿನ್ನೆಲೆ ಶನಿವಾರದಂದು ನಾಮಪತ್ರ ಸಲ್ಲಿಸಿದ್ದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊನೆವರೆಗೂ ಗುಟ್ಟು ಬಿಟ್ಟುಕೊಡದೇ ಬಮುಲ್ ನಿರ್ದೇಶಕ ಸ್ಥಾನಕ್ಕೆ ಕಡೆಯ ದಿನವೇ ಬೆಂಬಲಿಗರೊಂದಿಗೆ ಬಮೂಲ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇನ್ನು ಇತರ ಆಕಾಂಕ್ಷಿಗಳು ಸಲ್ಲಿಕೆ ಮಾಡಿದ್ದ ನಾಮಪತ್ರಗಳು ಅಮಾನ್ಯವಾಗಿರುವ ಕಾರಣಕ್ಕೆ ಇದೀಗ ಸುರೇಶ್ ಅವರೇ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ‌. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಇದರಲ್ಲಿ ವಿಶೇಷತೆ ಏನೂ ಇಲ್ಲ. ನಾನು ಅವರೆಲ್ಲರ ಜೊತೆ ಇರಬೇಕು ಎಂದು ಒತ್ತಾಯ ಮಾಡಿದ ಕಾರಣಕ್ಕೆ ಜೊತೆಯಾಗಿ ನಿಂತಿದ್ದೇನೆ ಎಂದು ಈ ಮುಂಚೆ ಸುರೇಶ್ ಅವರು ಹೇಳಿಕೆ ನೀಡಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button