Karnataka NewsPolitics
*ಬಿಬಿಎಂಪಿ ವಾರ್ ರೂಂ ಗೆ ಭೇಟಿ ನೀಡಿ ಮಳೆ ಪೀಡಿತ ನಗರದ ಪರಿಸ್ಥಿತಿ ಅವಲೋಕಿಸಿದ ಸಿಎಂ, ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಮ್ ಗೆ ಭೇಟಿ ನೀಡಿ, ಮಳೆ ಪೀಡಿತ ನಗರದ ಪರಿಸ್ಥಿತಿ ಅವಲೋಕಿಸಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಸಾಯಿಲೇಔಟ್, ಈಜಿಪುರ, ಹೆಚ್ ಎಸ್ ಆರ್ ಲೇಔಟ್, ಮಾನ್ಯತಾ ಟೆಕ್ ಪಾರ್ಕ್, ಸಂಪಂಗಿ ರಾಮನಗರ, ಶಾಂತಿನಗರ, ಜೆ.ಸಿ ರೋಡ್ ಜಂಕ್ಷನ್ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಮುಖ ಬಡಾವಣೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಣವಾಗಿದೆ. ಹಲವೆಡೆ ರಾಜಕಾಲುವೆಯ ನೀರು ಮನೆಗಳಿಗೆ ನುಗ್ಗಿ ಅವಾಂತರಗಳು ಸೃಷ್ಟಿಯಾಗಿದೆ.