Politics

*ಎಲ್ಲಾ ಕಡೆ ಒತ್ತುವರಿ ತೆರವಿಗೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಶಾಸಕರೊಂದಿಗೆ ತೆರಳಿ ಮಳೆ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಟಿ ರೌಂಡ್ಸ್ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಲ್ಲಾ ಕಡೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಿಗೆ ನೀರು ಬರುತ್ತಿರುವುದರಿಂದ ಸಮಸ್ಯೆಗಳಾಗಿವೆ ಎಂದರು.

ಕೆಲವೆಡೆ ರಸ್ತೆ ಅಗಲೀಕರಣಕ್ಕೆ ಸೂಚನೆ ನೀಡಿದ್ದೇವೆ. ಇನ್ನು ಮಹದೇವಪುರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣಕ್ಕೆ ಅರವಿಂದ ಲಿಂಬಾವಳಿ ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button