Belagavi NewsBelgaum NewsFilm & EntertainmentKannada NewsTravel

*ಟೋಲ್‌ ಪ್ಲಾಜಾದಲ್ಲಿ ಆಯಿಲ್‌ ಟ್ಯಾಂಕರ್ ಸ್ಫೋಟ: ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಹಾರಾಷ್ಟ್ರದಿಂದ ರಾಜ್ಯಕ್ಕೆ ಸಂಪರ್ಕ ಕಲ್ಪಸುವ ಕೋಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ನಿನ್ನೆ ರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಭಾರಿ ಆತಂಕಕ್ಕೆ ಕಾರಣವಾಗಿದೆ.‌

ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಿಪ್ಪಾಣಿ ಹೊರವಲಯದ ಕೋಗನೊಳ್ಳಿ ಟೋಲ್‌ ಪ್ಲಾಜಾದಲ್ಲಿ ಆಯಲ್ ಟ್ಯಾಂಕರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. 

ಟೋಲ್ ನಲ್ಲಿ ಹಣ ಕಟ್ಟಿ ಲಾರಿ ಮುಂದೆ ಸಾಗುವ ವೇಳೆ ಡಿಸೇಲ್ ಟ್ಯಾಂಕ್ ಸ್ಪೋಟಗೊಂಡಿದ್ದು ಈ ಸಂದರ್ಭದಲ್ಲಿ ಎರಡು ಟೋಲ್ ಸಂಗ್ರಹ ಘಟಕಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಬಂದಿದ್ದು ಬೆಂಕಿ ನಂದಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button