Belagavi NewsBelgaum NewsKannada NewsKarnataka News

*ಮುಂದಿನ 6 ದಿನ ರಾಜ್ಯದಲ್ಲಿ ಮಳೆ ಆರ್ಭಟ: ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಈಗಾಗಲೇ ಮಳೆ ಆರ್ಭಟ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಭಾರಿ ಮಳೆ ಆಗಲಿದೆ.

ಮುಂದಿನ 6 ದಿನಗಳ ಕಾಲ ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಉಡುಪಿ, ಶಿವಮೊಗ್ಗ ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಗುಡುಗು ಮಿಂಚು ಸಮೇತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Home add -Advt

ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. 

ಮುಂದಿನ ಐದು ದಿನ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button