Film & EntertainmentKarnataka News
*ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಟಿ.ನರಸೀಪುರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ನಟ ದರ್ಶನ್ ಅವರ ಕೆಂಪಯ್ಯನಹುಂಡಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ ನಲ್ಲಿ ವಿದೇಶಿ ತಳಿಯ ಬಾತುಕೋಳಿ ಸಾಕಿದ್ದು, ಈ ಪ್ರಕರಣ ಸಂಬಂಧ ಕೋರ್ಟ್ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ತೋಟದ ಮ್ಯಾನೇಜರ್ ಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ದರ್ಶನ್ ತಮ್ಮ ತೋಟದ ಮನೆಯಲ್ಲಿ ಬಾರ್ ಹೆಡೆಡ್ ಗೂಸ್ ಎಂಬ ವಿದೇಶಿ ತಳಿಯ ಬಾತುಕೋಳಿ ಸಾಕಿದ್ದು, ಅರಣ್ಯಾಧಿಕಾರಿಗಳು ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದ ವೇಳೆಯೂ ವಿದೇಶಿ ಬಾತುಕೋಳಿ ಇರುವುದು ಪತ್ತೆಯಾಗಿತ್ತು. ಈ ವೇಳೆ ಅಧಿಕಾರಿಗಳು ಬಾತುಕೋಳಿ ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.




