LatestNational

*ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಕ್ಷುಬ್ಧಗೊಂಡ ಸಮುದ್ರ: ದಡಕ್ಕಪ್ಪಳಿಸುತ್ತಿದೆ ಬೃಹತ್ ಅಲೆಗಳು

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರ್ವಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಾಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತಷ್ಟು ಮಳೆಯ ಅಬ್ಬರ ಜೋರಾಗಲಿದೆ ಎಂದು ಮುನ್ಸೂಚನೆನೀಡಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಪುದಿಚೆರಿಗಳಲ್ಲಿ ಭಾರಿ ಮಳೆಯಾಗಲಿದೆ. ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೇ ಸಮುದ್ರ ತೀರದ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಖಡಕ್ ಸೂಚನೆ ನೀಡಲಾಗಿದೆ.

ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ವರುಣಾರ್ಭಟ ಜೋರಾಗಲಿದೆ.

ಈಗಾಗಲೇ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮೇ 27ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಕರ್ನಟಕ ಸೇರಿ ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Articles

Back to top button