Karnataka News

*ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಸಾಲು ಸಾಲು ಅವಾಂತರಗಳು ಸಭವಿಸುತ್ತಿವೆ. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರಿನೊಳಗಡೆ ಸಿಲುಕಿ ನಾಲ್ವರು ಪರದಾಡಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಬಳಿ ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಮರಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನೊಳಗಡೆ ಸಿಲುಕಿಕೊಂಡವರು ಹೊರಬರಲಾಗದೆ ರಕ್ಷಣೆಗಾಗಿ ಮೊರೆಯಿಟ್ಟಿದ್ದಾರೆ.

ಇತರ ವಾಹನ ಸವಾರರು, ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕಾರು ಚಾಲಕ, ಇಬ್ಬರು ಮಳೆಯರು, ಮಗು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button